
ಅರಬ್ ಪ್ರವಾಸಿಗರ ಸೆಳೆಯಲು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ ಜೆ ಜಾರ್ಜ್ ಮಾಸ್ಟರ್ ಪ್ಲಾನ್
ಭಾರತಕ್ಕೆ ಚಿಕಿತ್ಸೆಗಾಗಿ ಬರುವ ಅರಬ್ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಭಾರತಕ್ಕೆ ಚಿಕಿತ್ಸೆಗಾಗಿ ಬರುವ ಅರಬ್ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಪ್ರತಿವರ್ಷ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಅರಬ್ ಪ್ರವಾಸಿಗರು ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಆಗಮಿಸುತ್ತಿದ್ದು, ಈ ಬೃಹತ್ ಮಾರುಕಟ್ಟೆಯಲ್ಲಿ ಕರ್ನಾಟಕದ ಪಾಲನ್ನು ಹೆಚ್ಚಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಕೆ.ಜೆ. ಜಾರ್ಜ್ ಅವರು, ಕರ್ನಾಟಕದಲ್ಲಿ ಅತ್ಯುತ್ತಮ ವೈದ್ಯಕೀಯ ಮೂಲಸೌಕರ್ಯ, ಪರಿಣತ ವೈದ್ಯರು ಹಾಗೂ ವಿಶ್ವದ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಆಸ್ಪತ್ರೆಗಳಿವೆ.
ಆರೋಗ್ಯ ಸೇವೆ ಮತ್ತು ಪ್ರವಾಸೋದ್ಯಮವನ್ನು ಬೆಸೆಯುವ ಮೂಲಕ ರಾಜ್ಯವನ್ನು ವಿಶ್ವಾಸಾರ್ಹ ವೈದ್ಯಕೀಯ ತಾಣವಾಗಿ ರೂಪಿಸಲಾಗುವುದು ಎಂದಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ವೈದ್ಯಕೀಯ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಕ್ಷೇತ್ರ, ಆಸ್ಪತ್ರೆಗಳು ಮತ್ತು ಸಂಬಂಧಿತ ಸೇವಾ ವಲಯಗಳ ನಡುವೆ ಪರಿಣಾಮಕಾರಿ ಸಮನ್ವಯ ಅತ್ಯಗತ್ಯವಾಗಿದೆ. ವೈದ್ಯರು, ಆಸ್ಪತ್ರೆಗಳು, ಹೋಟೆಲ್ಗಳು, ಟ್ರಾವೆಲ್ ಸಂಸ್ಥೆಗಳು ಮತ್ತು ವೆಲ್ನೆಸ್ ಕೇಂದ್ರಗಳನ್ನು ಒಂದೇ ವೇದಿಕೆಯಲ್ಲಿ ಜೋಡಿಸುವ ವ್ಯವಸ್ಥೆ ರೂಪಿಸಲಾಗುತ್ತಿದ್ದು, ಜನವರಿಯಲ್ಲಿ ನಡೆಯಲಿರುವ ಸಮ್ಮೇಳನ ಈ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದ್ದಾರೆ. ರೋಗಿಗಳು ಮತ್ತು ಅವರೊಂದಿಗೆ ಆಗಮಿಸುವ ಕುಟುಂಬ ಸದಸ್ಯರಿಗೆ ಉತ್ತಮ ಚಿಕಿತ್ಸೆಯ ಜೊತೆಗೆ ವಸತಿ, ಸಾರಿಗೆ, ಭಾಷಾ ಸಹಾಯ, ವೆಲ್ನೆಸ್ ಮತ್ತು ಆಯ್ದ ಪ್ರವಾಸಿ ತಾಣಗಳ ವೀಕ್ಷಣೆಯ ಅನುಭವವನ್ನು ಒದಗಿಸುವ ಮೂಲಕ ರಾಜ್ಯದಲ್ಲಿ ಸಮಗ್ರ ವೈದ್ಯಕೀಯ ಪ್ರವಾಸೋದ್ಯಮ ಪರಿಸರವನ್ನು ನಿರ್ಮಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ