Breaking News
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು.
ತರೀಕೆರೆ: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು :
ತರೀಕೆರೆ ತಾಲ್ಲೂಕಿನ ಬಾವಿಕೆರೆ ಬಳಿ ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸಾವನ್ನಪ್ಪಿದ್ದು, ಸ್ಥಳೀಯರಲ್ಲಿ ದುಃಖದ ವಾತಾವರಣ ಮೂಡಿದೆ.
ಮೃತರನ್ನು ಕರಕುಚ್ಚಿ ಏ ಕಾಲೋನಿಯ ರಾಜಶೇಖರ್ (51) ಎಂದು ಗುರುತಿಸಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಈ ದುರ್ಘಟನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತೀವ್ರ ಆಘಾತಕ್ಕೊಳಗಾಗಿದ್ದಾರೆ. ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡ ರಾಜಶೇಖರ್ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಸ್ಥಳೀಯರು ಸಂತಾಪ ಸೂಚಿಸಿದ್ದಾರೆ..
